ಲೋಕಸಭಾ ಚುನಾವಣೆಯ ಈ ಸಂಧರ್ಭದಲ್ಲಿ ನಿನ್ನ ತಾ:3-4-19ರಂದು ಚುನಾವಣೆ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಮಂಗಳೂರಿನ ಅತ್ತಾವರ ವಾರ್ಡಿನ ಹಲವು ಬಿಜೆಪಿ ಕಾರ್ಯಕರ್ತರು ಶ್ರೀ ಅಕ್ಷಯ್ ಕುಮಾರ್‍ರವರ ನೇತೃತ್ವದಲ್ಲಿ ದಕ್ಷಿಣ ಬ್ಲಾಕ್ ಅಧ್ಯಕ್ಷ ಶ್ರೀ ಅಬ್ದುಲ್ ಸಲೀಂರವರ ಸಮ್ಮುಖದಲ್ಲಿ ಸೇರ್ಪಡೆಗೊಂಡರು . ಅತ್ತಾವರ ಬಾಬುಗುಡ್ಡೆ ಪ್ರದೇಶದ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದ ಹಲವರು ಬಿಜೆಪಿ ದ್ವಂದ್ವ ನೀತಿ ಧೋರಣೆಗಳಿಂದ ಅಸಮಾಧಾನಗೊಂಡು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಶ್ರೀ ಅಕ್ಬರ್ ಆಲೀಂ, ಮಾಜಿ ಮೂಡಾ ಅಧ್ಯಕ್ಷ ತೇಜೋಮಯ, ಮಾಜಿ ಮೇಯರ್ ಮಹಾಬಲ ಮಾರ್ಲ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಟಿ.ಕೆ.ಸುಧೀರ್, ಯುವ ಕಾಂಗ್ರೆಸ್ ಅಧ್ಯಕ್ಷ ಮೆರಿಲ್ ರೇಗೋ, ರಾಜ್ಯ ಕಾರ್ಯದರ್ಶಿ ಸುಹೈಲ್ ಕಂದಕ್, ರಾಜ್ಯ ಎಸ್.ಸಿ/ಎಸ್.ಟಿ ಘಟಕ ಸಹಸಂಚಾಲಕ ಹೊನ್ನಯ್ಯ, ವಾರ್ಡ ಅಧ್ಯಕ್ಷ ಜಯಂತ್ ಪೂಜಾರಿ, ಯುವ ಕಾಂಗ್ರೆಸ್ ಉಪಾಧ್ಯಕ್ಷ ರಮಾನಂದ ಪೂಜಾರಿ, ಮಾಜಿ ಕಾರ್ಪೋರೇಟರ್ ಭಾಸ್ಕರ್ ರಾವ್ ಮೊದಲಾದವರು ಉಪಸ್ಥಿತರಿದ್ದರು.