ಮಂಗಳೂರು: ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ ಅಕ್ಟೋಬರ್ 16 ರಂದು ಆದಿತ್ಯವಾರ ಬೆಳಿಗ್ಗೆ 10.30 ಕ್ಕೆ ಮಂಗಳೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿರುವುದು.

ಈ ಸಭೆಗೆ ಶಾಸಕರಾದ ಜೆ.ಆರ್.ಲೋಬೊ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ,ಜಿಲ್ಲಾ ಎಸ್ ಸಿ ಎಸ್ ಟಿ ಘಟಕ ಅಧ್ಯಕ್ಷರಾದ ಪದ್ಮನಾಭ ನರಿಂಗಾಣ ಹಾಗೂ ಹಿರಿಯ ನಾಯಕರು ಭಾಗವಹಿಸುವರು.

ಈ ಸಭೆಗೆ ವಾರ್ಡ್ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಮಹಾನಗರ ಪಾಲಿಕೆಯ ಸದಸ್ಯರು, ಘಟಕಗಳ ಪದಾಧಿಕಾರಿಗಳು,ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬ್ಲಾಕ್ ನ ಪ್ರಧಾನ ಕಾರ್ಯದರ್ಶಿ ದುರ್ಗಾ ಪ್ರಸಾದ್ ವಿನಂತಿಸಿದ್ದಾರೆ.