ಮಂಗಳೂರು: ನಗರದ ಕದ್ರಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 1.98 ಕೋಟಿ ರೂಪಾಯಿ ವೆಚ್ಚದಲ್ಲಿ ಆಶ್ರಮ ಶಾಲೆ ಕಟ್ಟಡಕ್ಕೆ ಶಾಸಕ ಜೆ.ಆರ್.ಲೋಬೊ ಅವರು ಶಿಲಾನ್ಯಾಸ ಮಾಡಿದರು. ಈ ಸಂದರ್ಭದಲ್ಲಿ ನಗರ ಪಾಲಿಕೆ ಸದಸ್ಯರಾದ ರೂಪಾ . ಡಿ.ಬಂಗೇರ, ಕೆ ಎಸ್ ಆರ್ ಟಿಸಿ ನಿರ್ದೇಶಕ ಟಿ.ಕೆ.ಸುಧೀರ್, ನೆಲ್ಸನ್ , ಪುಷ್ಪರಾಜ್ ಪೂಜಾರಿ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.