ಮಂಗಳೂರು: ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕ್ಷೇತ್ರದಲ್ಲಿ ಡಿಸೆಂಬರ್ 25 ರಿಂದ 28 ರವರೆಗೆ ನಡೆಯುವ ಬ್ರಹ್ಮ ಕಲಶೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಇಂಧನ ಸಚಿವ ಡಿ.ಕೆ.ಶಿವ ಕುಮಾರ್ ಅವರನ್ನು ಆಹ್ವಾನಿಸಲಾಗಿದೆ.

ಶಾಸಕ ಜೆ.ಆರ್.ಲೋಬೊ ಅವರು ಕ್ಷೇತ್ರದ ವತಿಯಿಂದ ಮುಖ್ಯ ಅತಿಥಿಯಾಗಿ ಬರುವಂತೆ ಡಿ.ಕೆ.ಶಿವ ಕುಮಾರ್ ಅವರಿಗೆ ಆಹ್ವಾನ ಪತ್ರಿಕೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಆಹ್ವಾನ ಸ್ವೀಕರಿಸಿದ ಸಚಿವ ಶಿವ ಕುಮಾರ್ ಅವರು ಕ್ಷೇತ್ರದ ವಿವರ ಪಡೆದು ಮಾತನಾಡಿ ತಾವು ಖುದ್ದು ಬರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಮಂಡಳಿಯ ಪದಾಧಿಕಾರಿಗಳ ಜೊತೆಯಲ್ಲಿ ಕಾರ್ಪೊರೇಟರ್ ಪ್ರವೀಣ್ ಚಂದ್ರ ಆಳ್ವ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರಿದ್ದರು.