ಮಂಗಳೂರು:ದ.ಕ.ಜಿಲ್ಲೆಯಲ್ಲಿ ಕೃಷಿಯೊಂದಿಗೆ ನಂಟುಹೊಂದಿರುವ, ತಲಾಂತರದಿಂದ ನಡೆದುಕೊಂಡು ಬಂದಿರುವ ಕರಾವಳಿಯ ಸಾಂಪ್ರದಾಯಿಕ ಕಂಬಳ ಕ್ರೀಡೆಗೆ ಹೇರಿರುವ ನಿಷೇಧವನ್ನು ತಕ್ಷಣದಿಂದ ಹಿಂಪಡೆಯಲು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಸದಸ್ಯರು ಒತ್ತಾಯಿಸುತ್ತಿದ್ದಾರೆ.

ಈ ಬಗ್ಗೆ ಇದೇ ದಿನಾಂಕ 28-1-2017 ರಂದು ಮೂಡಬಿದ್ರೆಯ ಸ್ವರಾಜ್ ಮೈದಾನದಲ್ಲಿ ಬೆಳಿಗ್ಗೆ 9 ಕ್ಕೆ ನಡೆಯುವ ಕಂಬಳ ಉಳಿಸಿ ಕಾರ್ಯಕ್ರಮಕ್ಕೆ ಅತ್ಯಧಿಕ ಸಂಖ್ಯೆಯಲ್ಲಿ ಕಂಬಳ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಬೆಂಬಲ ಸೂಚಿಸಬೇಕೆಂದು ಬ್ಲಾಕ್ ಕಾಂಗ್ರೆಸ್ ಸಮಿತಿ ವಿನಂತಿಸುತ್ತದೆ