Home » Website » News from jrlobo's Office » ಕಸಬಾ ಬೆಂಗರೆ ರಸ್ತೆ ಕಾಂಕ್ರೀಟಿಕರಣಕ್ಕೆ 25 ಲಕ್ಷ ರೂಪಾಯಿ : ಶಾಸಕ ಜೆ.ಆರ್.ಲೋಬೊ
ಕಸಬಾ ಬೆಂಗರೆ ರಸ್ತೆ ಕಾಂಕ್ರೀಟಿಕರಣಕ್ಕೆ 25 ಲಕ್ಷ ರೂಪಾಯಿ : ಶಾಸಕ ಜೆ.ಆರ್.ಲೋಬೊ
Image from post regarding ಕಸಬಾ ಬೆಂಗರೆ ರಸ್ತೆ ಕಾಂಕ್ರೀಟಿಕರಣಕ್ಕೆ 25 ಲಕ್ಷ ರೂಪಾಯಿ : ಶಾಸಕ ಜೆ.ಆರ್.ಲೋಬೊ

ಕಸಬಾ ಬೆಂಗರೆ ರಸ್ತೆ ಕಾಂಕ್ರೀಟಿಕರಣಕ್ಕೆ 25 ಲಕ್ಷ ರೂಪಾಯಿ : ಶಾಸಕ ಜೆ.ಆರ್.ಲೋಬೊ

ಮಂಗಳೂರು: ಕಸಬ ಬೆಂಗರೆಯ ಮುಖ್ಯ ರಸ್ತೆ ಕಾಂಕ್ರೀಟಿಕರಣಕ್ಕೆ 25 ಲಕ್ಷ ರೂಪಾಯಿಯನ್ನು ಮಂಜೂರು ಮಾಡಲಾಗಿದ್ದು ಈ ಕಾಮಗಾರಿಯನ್ನು ಮುತುವರ್ಜಿಯಿಂದ ಮಾಡುವಂತೆ ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು.

ಅವರು ಈ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡುತ್ತಿದ್ದರು. ಈ ಕಾಮಗಾರಿಗೆ ಆರ್ಥಿಕ ನೆರವನ್ನು ಸರ್ಕಾರದ ಮೀನುಗಾರಿಕೆ ಇಲಾಖೆ ನೀಡಿದ್ದು ಇದನ್ನು ಶೀಘ್ರವಾಗಿ ಮುಗಿಸುವಂತೆ ಅವರು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಮಸೀದಿ ಅಧ್ಯಕ್ಷ ಅಸ್ಲಾಂ, ಬೆಂಗರೆ ವಾರ್ಡ್ ಕಾಂಗ್ರೆಸ್ ಅಧ್ಯಕ್ಷ ಆಸೀಫ್, ಸುಲೈಮಾನ್, ಸಿ.ಪಿ.ಮುಸ್ತಾಫಾ, ಬಶೀರ್ ಹಾಜೀ ಮೊದಲಾದವರು ಉಪಸ್ಥಿತರಿದ್ದರು.