ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಎಂ. ಮಿಥುನ್ ರೈ ಅವರ ಪರವಾಗಿ ಮತಯಾಚನೆಗೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ದಿನೇಶ್ ಗುಂಡೂರಾವ್ ರವರು ಚುನಾವಣಾ ಕಛೇರಿಗೆ ಭೇಟಿ ನೀಡಿ ಕಾರ್ಯಕರ್ತರ ಜೊತೆ ಸಮಾಲೋಚನೆ ಮತ್ತು ಪ್ರಚಾರದ ಕಾರ್ಯವೈಖರಿಯನ್ನು ಚರ್ಚಿಸಿದರು. ಈ ಸಂದರ್ಭದಲ್ಲಿ ಡಿಸಿಸಿ ಜಿಲ್ಲಾಧ್ಯಕ್ಷರಾದ ಶ್ರೀ ಹರೀಶ್ ಕುಮಾರ್, ಅಭ್ಯರ್ಥಿ ಶ್ರೀ ಮಿಥುನ್ ಎಂ. ರೈ, ಉಸ್ತುವಾರಿ ಸಚಿವರಾದ ಶ್ರೀ ಯು.ಟಿ. ಖಾದರ್, ಕೆಪಿಸಿಸಿ ಕಾರ್ಯದರ್ಶಿ ಕಳ್ಳಿಗೆ ತಾರಾನಾಥ ಶೆಟ್ಟಿ, ಮೂಡಾ ಅಧ್ಯಕ್ಷರಾದ ಶ್ರೀ ಸುರೇಶ್ ಬಲ್ಲಾಳ್, ಮಾಜಿ ಮೇಯರ್ ಮಹಾಬಲ ಮಾರ್ಲ, ಮನಪಾ ಸದಸ್ಯರಾದ ಎ.ಸಿ. ವಿನಯರಾಜ್, ಪ್ರವೀಣ್ ಚಂದ್ರ ಆಳ್ವ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಮೋಹನ್ ಶೆಟ್ಟಿ, ಸಂತೋಷ್ ಶೆಟ್ಟಿ, ಉಪಸ್ಥಿತರಿದ್ದರು.