ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರು ಜಪ್ಪಿನಮೊಗರು ವಾರ್ಡ್ ಯುವ ಕಾಂಗ್ರೆಸ್ ವಾರ್ಡ್ ಸಮಿತಿಯ ಉದ್ಘಾಟನೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಯುವ ಶಕ್ತಿ ದೇಶದ ಶಕ್ತಿ. ಈ ಶಕ್ತಿ ಒಗ್ಗೂಡಿಸುವ ಪ್ರಯತ್ನವನ್ನು ನಾವು ಮಾಡಬೇಕಾಗಿದೆ ಎಂದು ಅವರು ಕರೆ ನೀಡಿದರು.

ಯುವ ಶಕ್ತಿಯನ್ನು ಒಗ್ಗೂಡಿಸುವ ಪ್ರಯ್ನದಲ್ಲಿ ನಾವು ಮುನ್ನಡೆಯುವ ಒಟ್ಟಾಗಿ ಮುಂಬರುವ ಚುನಾವಣೆಯಲ್ಲಿ ನಾವೆಲ್ಲರೂ ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ಪ್ರಯತ್ನ ಮಾಡಬೇಕು ಎಂದು ಜೆ.ಆರ್.ಲೋಬೊ ಅವರು ಕರೆ ನೀಡಿದರು.
ಮುಂದಿನ ದಿನಗಳಲ್ಲಿ ಮಂಗಳೂರು ನಗರವನ್ನು ಮಾದರಿ ನಗರವನ್ನಾಗಿ ಮಾಡೋಣ. ಭಿನ್ನಾಭಿಪ್ರಾಯವನ್ನು ಬದಿಗಿಟ್ಟು ಒಗ್ಗಟ್ಟಿನಿಂದ ಕಾರ್ಯಾಚರಿಸೋಣ. ಇದಕ್ಕೆ ನಿಮ್ಮೆಲ್ಲರ ಸಹಕಾರ ಬೇಕಾಗಿದೆ ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಿತು. ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮನ್ವಿತಾ ಅವರ ಮನೆಯವರಿಗೆ ಸಹಾಯಧನ ವಿತರಿಸಲಾಯಿತು. ಸಭೆಯಲ್ಲಿ ಬ್ಲಾಕ್ ಅಧ್ಯಕ್ಷ ಸಲೀಂ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.