ಕಳೆದ 28 ವರ್ಷದಲ್ಲಿ ಬಿಜೆಪಿಯ ಭದ್ರಕೋಟೆ ಯಾಗಿರುವ ಈ ಜಿಲ್ಲೆ ರಾಜಕೀಯವಾಗಿ ಬದಲಾವಣೆ ವಾಗಬೇಕಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು , ಪ್ರಜ್ಞಾವಂತ ಯುವಕರು ಒಗ್ಗಟ್ಟಿನಿಂದ ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಶ್ರಮಿಸಬೇಕು ಎಂದು ಮಿಥುನ್ ರೈ ಬಂಟ್ವಾಳ ಪೇಟೆಯಲ್ಲಿ ತೆರೆದ ವಾಹನದ ಮೂಲಕ ರೋಡ್ ಶೋ ನಡೆದಿ ಮತದಾರರನ್ನು ಉದ್ದೇಶಿಸಿ ಮಾತನಾಡಿದರು.

ಪಕ್ಷದ ಕಾರ್ಯಕರ್ತರು ಮತದಾರರು ನನ್ನ ಮೇಲೆ ಇಟ್ಟಿರುವ ನಂಬಿಕೆ ವಿಶ್ವಾಸಕ್ಕೆ ಯಾವುದೇ ಚ್ಯುತಿ ಬರದಂತೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಪರಿವರ್ತನೆ ಮಾಡಲು ನನಗೆ ಅವಕಾಶ ನೀಡಬೇಕು. ಈ ಚುನಾವಣೆ ಯಾವುದೇ ವೈಯಕ್ತಿಕ ಹೋರಾಟ ಅಲ್ಲ. ಇದು ನಮ್ಮೆಲ್ಲರ ಗೆಲುವು ಎಂದು ಭಾವಿಸಿ ಪ್ರತಿಯೊಬ್ಬ ಕಾರ್ಯಕರ್ತರು ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಾಜಿ ಉಸ್ತುವಾರಿ ಸಚಿವರಾದ ಶ್ರೀ ಬಿ.ರಮಾನಾಥ ರೈ, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರ ಪ್ರಕಾಶ್ ಶೆಟ್ಟಿ , ಮೈಲಪ್ಪ ಸಾಲ್ಯಾನ್, ಸುದರ್ಶನ್ ಜೈನ್, ಬೇಬಿ ಕುಂದರ್, ಸುಧೀಪ್ ಕುಮಾರ್ ಶೆಟ್ಟಿ, ಬಿ.ಎಚ್.ಖಾದರ್ , ಚಿತ್ತರಂಜನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.