ಮಂಗಳೂರು: ಬಜಾಲ್ ಅಂಡರ್ ಪಾಸ್ ನಲ್ಲಿ ಮಳೆಗಾಲದಲ್ಲಿ ನೀರು ನಿಂತಿರುವುದರಿಂದ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವ ಬಗ್ಗೆ ಶಾಸಕ ಜೆ.ಆರ್.ಲೋಬೊ ಅವರು ಸ್ಥಳ ಪರಿಶೀಲನೆ ಮಾಡಿದರು. ಅಧಿಕಾರಿಗಳು ನೀರನ್ನು ತೆರವುಗೊಳಿಸಲು ಪಂಪ್ ಅಳವಡಿಸಿದ್ದು ಇದು ಸಮರ್ಪಕವಾಗಿಲ್ಲದಿರುವ ಬಗ್ಗೆ ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.

ಸ್ಥಳದಲ್ಲಿದ್ದ ಅಧಿಕಾರಿಗಳ ಜೊತೆ ಪರ್ಯಾಯ ವ್ಯವಸ್ಥೆ ಮಾಡಲು ವಿಷಯ ತಿಳಿದು ಕೊಂಡು ಸೂಕ್ತ ಪರಿಹಾರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪಕ್ಕದಲ್ಲೇ ವೀರನಗರಕ್ಕೆ ಹೋಗುವ ರಸ್ತೆ ಕಾಮಗಾರಿಯನ್ನು ಕೂಡಾ ಪರಿಶೀಲಿಸಿದರು. ಕಾಮಗಾರಿ ಪ್ರಗತಿಯಲ್ಲಿದ್ದು ಕೆಲವೇ ದಿನಗಳಲ್ಲಿ ಕಾಮಗಾರಿ ಮುಗಿದು ವಾಹನಗಳು ಸಾಗಾಟ ಮಾಡಲು ವ್ಯವಸ್ಥೆಯಾಗಲಿದೆ ಎಂದು ಶಾಸಕ ಜೆ.ಆರ್.ಲೋಬೊ ಅವರು ಜನರಿಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಇಂಜಿನಿಯರ್ ಲಿಂಗೇಗೌಡ, ಯಶವಂತ್ ಮತ್ತು ಗಣಪತಿ ಹಾಜರಿದ್ದರು