ಬೆಂಗರೆ 60 ನೇ ವಾರ್ಡ್ ನ ಅಧ್ಯಕ್ಷರನ್ನಾಗಿ ಆಸೀಫ್ ಅಹಮದ್ ಅವರನ್ನು ಶಾಸಕ ಜೆ.ಆರ್.ಲೋಬೊ ಅವರ ಶಿಫಾರಸು ಮೇರೆಗೆ ಮಂಗಳೂರು ಬ್ಲಾಕ್ ಅಧ್ಯಕ್ಷ ಕೆ.ಬಾಲಕೃಷ್ಣ ಶೆಟ್ಟಿ ಅವರು ನೇಮಿಸಿದ್ದಾರೆ. ಅಧಿಕೃತವಾಗಿ ಅಧಿಕಾರ ವಹಿಸಿಕೊಂಡ ಆಸೀಫ್ ಅಹಮದ್ ಅವರನ್ನು ಶಾಸಕ ಜೆ.ಆರ್.ಲೋಬೊ ಅವರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಕೆ.ಬಾಲಕೃಷ್ಣ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ, ಬ್ಲಾಕ್ ಮಹಿಳಾ ಘಟಕ ಅಧ್ಯಕ್ಷೆ ನಮಿತಾ ಡಿ.ರಾವ್, ಬ್ಲಾಕ್ ಪದಾಧಿಕಾರಿಗಳು, ಕಾರ್ಯಕರ್ತರ ಸಹಿತ ಇತರರಿದ್ದರು.