ಮಂಗಳೂರು: ಜೆಪ್ಪುನಲ್ಲಿರುವ ಭಗಿನಿ ಸಮಾಜದಲ್ಲಿ ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ದೀಪಾವಳಿ ಸಂಭ್ರಮಾಚರಣೆ ಕಾರ್ಯಕ್ರಮ ಜರಗಿತು.

ಭಗಿನಿ ಸಮಾಜದ ಮಕ್ಕಳೊಂದಿಗೆ ಶಾಸಕ ಜೆ.ಆರ್.ಲೋಬೊ ಅವರು ದೀಪಾವಳಿ ಹಬ್ಬದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಜೆ.ಆರ್.ಲೋಬೊ ಅವರು ಈ ಹಬ್ಬವು ಎಲ್ಲರಿಗೆ ಸುಖ, ಸಮೃದ್ಧಿಯನ್ನು ನೀಡಲಿ ಎಂದು ಹಾರೈಸಿದರು.

ದೀಪಾವಳಿ ಹಬ್ಬ ಪ್ರತಿಯೊಬ್ಬರ ಜೀವನದಲ್ಲಿ ಚೈತನ್ಯದ ಬೆಳಕು ನೀಡಲಿ ಎಂದು ಹಾರೈಸಿದ ಅವರು ಹೊಸ ಉತ್ಸಾಹವನ್ನು ತರಲಿ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸಲೀಂ, ಮಂಗಳೂರು ತಾಲೂಕು ಭೂನ್ಯಾಯ ಮಂಡಳಿ ಸದಸ್ಯ ಡೆನ್ನೀಸ್ ಡಿಸಿಲ್ವಾ, ಕಾರ್ಪೊರೇಟರ್ ಗಳು, ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.