ಇಂದು ತಾ.03/05/2018ರಂದು ಬೆಳಿಗ್ಗೆ , ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ.ಜೆ.ಆರ್.ಲೋಬೊರವರು ಬಂದರು ದಕ್ಕೆ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಲೋಬೊರವರು ಆ ಪ್ರದೇಶದಲ್ಲಿ ಮೀನು ವ್ಯಾಪಾರ ಮಾಡುವ ನೂರಕ್ಕೂ ಅಧಿಕ ಜನ ವ್ಯಾಪಾರಸ್ಥರನ್ನು ಭೇಟಿ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಗೆಲ್ಲಿಸಬೇಕೆಂದು ಮನವಿ ಮಾಡಿದರು. ತದನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಲೋಬೊರವರು ಕಳೆದ 5 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷ ಮಾಡಿದಂತಹ ಕಾರ್ಯಕ್ರಮಗಳನ್ನು ಜನರು ಮೆಚ್ಚಿಕೊಂಡಿದ್ದಾರೆ.ಪ್ರತಿಪಕ್ಷಗಳು ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುವಂತಹಾ ಕೆಲಸದಲ್ಲಿ ನಿರತರಾಗಿದ್ದಾರೆ.ಕಾಂಗ್ರೆಸ್ ಸರಕಾರದ ಕಾರ್ಯವೈಕರಿಯನ್ನು ಜೀರ್ಣಿಸಿಕೊಳ್ಳಲು ಅವರಿಂದ ಸಾಧ್ಯವಾಗುತ್ತಿಲ್ಲ.ಖಂಡಿತವಾಗಿಯೂ ಈ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುತ್ತಾರೆ ಎಂದರು.ಈ ಸಂದರ್ಭದಲ್ಲಿ ಕಾರ್ಪೋರೇಟರ್ ಗಳಾದ ಲತೀಫ್ ಕಂದಕ್, ಕವಿತಾವಾಸು, ಅಸ್ಲಂ,ಸಂಶುದ್ಧಿನ್, ಸಿ.ಯಂ.ಮುಸ್ತಾಫಾ, ಸರಳಾ ಕರ್ಕೇರ, ಸರಿತಾ ಬೆಂಗ್ರೆ, ಮಜೀದ್, ಸುಧಾಕರ್ ಶೆಣೈ ಮುಂತಾದವರು ಉಪಸ್ಥಿತರಿದ್ದರು.