ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರು 37 ನೇ ಮರೋಳಿ ವಾರ್ಡ್ ನ 47 ನೇ ಬೂತ್ ವತಿಯಿಂದ ನಡೆದ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಪಕ್ಷದ ಸಾಧನೆಯ ಬಗ್ಗೆ ಕಾರ್ಯಕರ್ತರು ಶ್ರದ್ಧಯಿಂದ ಕೆಲಸ ಮಾಡುವಂತೆ ಕರೆ ನೀಡಿದರು.

ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯತೆಯ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುವಂತೆ ತಿಳಿಸಿದರಲ್ಲದೇ ಮನೆ ಮನೆ ಭೇಟಿ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಯಶಸ್ವಿಯಾಗಲು ಶ್ರಮಿಸುವಂತೆ ಶಾಸಕ ಜೆ.ಆರ್.ಲೋಬೊ ಅವರು ಕರೆ ನೀಡಿದರು