ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರು ಕೋರ್ಟ್ ವಾರ್ಡ್ ನ ಸನ್ಯಾಸಿಗುಡ್ಡೆಯಲ್ಲಿ ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಬಹುತೇಕ ಬೂತ್ ನಲ್ಲಿ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು ಕಾಂಗ್ರೆಸ್ ಕಾರ್ಯಕ್ರಮದ ಮೂಲಕ ಹಲವಾರು ಮನೆಗಳಿಗೆ ಭೇಟಿ ನೀಡಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಸನ್ಮಾನ್ಯ ಮುಖ್ಯ ಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸಾಧನೆಯ ಬಗ್ಗೆ ಜನರು ಒಲವು ತೋರುತ್ತಿದ್ದಾರೆ ಎಂದರು.

ಜನರಿಗೆ ಹಲವಾರು ಕಾರ್ಯಕ್ರಮಗಳ ಮೂಲಕ ದೇಶದಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದ ಅವರು ಸರ್ಕಾರದ ಸಾಧನೆಯ ಬಗ್ಗೆ ಜನರು ಪ್ರತೀ ಮನೆಗೆ ತಿಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದರು.

ಮನೆ ಮನೆಗೆ ಭೇಟಿ ಕಾರ್ಯಕ್ರಮ ಒಂದು ಹೊಸ ಚೈತನ್ಯ ನೀಡುವಲ್ಲಿ ಪರಿಣಾಮಕಾರಿಯಾಗಿದೆ ಎಂದ ಶಾಸಕ ಜೆ.ಆರ್.ಲೋಬೊ ಅವರು ನಾಡಿನ ಸಮಸ್ತೆ ಜನತೆಗೆ ದೀಪಾವಳಿ ಹಬ್ಬದ ಶುಭಾಷಯ ತಿಳಿಸಿದರು.

ನಂತರ ಶಾಸಕರು ಮಂಗಳಾದೇವಿ ವಾರ್ಡ್ ಹಾಗೂ ಹೊಯ್ಗೆ ಬಜಾರ್ ವಾರ್ಡ್ ನಲ್ಲಿ ನಡೆದ ಮನೆ ಮನೆಗೆ ಭೇಟಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಶಾಸಕರೊಂದಿಗೆ ಕಾರ್ಪೊರೇಟರ್ ಎ.ಸಿ.ವಿನಯರಾಜ್ ಭಾಗವಹಿಸಿದ್ದರು.