ಮಂಗಳೂರು: ದಕ್ಷಿಣ ವಿಧಾನ ಸಭಾದ ಮೂರು ಕಾಮಗಾರಿಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ 40 ಲಕ್ಷ ರೂಪಾಯಿಯನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಮಂಜೂರು ಮಾಡಿದೆ ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದ್ದಾರೆ.

ಕಪಿತಾನಿಯೋ ಬೋರ್ಡ್ ಶಾಲೆ ಬಳಿಯ ರಸ್ತೆ ಅಭಿವೃದ್ಧಿಗೆ 10 ಲಕ್ಷ ರೂಪಾಯಿ ಮತ್ತು ಮರೋಳಿಯ ಸಾತಾವು ಜೋಡು ಕಟ್ಟೆ ರಸ್ತೆ ಅಭಿವೃದ್ಧಿಗೆ 10 ಲಕ್ಷ ರೂಪಾಯಿಯನ್ನು ಮಂಜೂರು ಮಾಡಿದೆ.

ಬಜಾಲ್ ಗ್ರಾಮದ ಸೊನಾಲಿಕೆಯಲ್ಲಿ ಶಿವ ಮಂದಿರಕ್ಕೆ ಹೋಗುವ ರಸ್ತೆಯ ತಡೆಗೋಡೆ ಮತ್ತು ರಸ್ತೆ ಅಭಿವೃದ್ಧಿಗೆ 20 ಲಕ್ಷ ರೂಪಾಯಿಯನ್ನು ಮಂಜೂರು ಮಾಡಿದೆ ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದ್ದಾರೆ.