ಮಂಗಳೂರು: ಬದ್ರಿಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೆ.23 ರಂದು ಸಂಜೆ 4.00 ಗಂಟೆ ಶಾಸಕ ಜೆ.ಆರ್.ಲೋಬೊ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದ ಜನಸಂಪರ್ಕ ಸಭೆಯನ್ನು ಮುಂದೂಡಲಾಗಿದೆ. ಬೆಂಗಳೂರಲ್ಲಿ ತುರ್ತು ಅಧಿವೇಶನ ಕರೆದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಜನಸಂಪರ್ಕಸಭೆಯನ್ನು ಮುಂದೂಡಲಾಗಿದೆ ಎಂದು ತಿಳಿಸಲಾಗಿದೆ..

ಮುಂದಿನ ದಿನಗಳಲ್ಲಿ ಜನಸಂಪರ್ಕ ಸಭೆಯನ್ನು ಆಯೋಜಿಸಲಾಗುವುದು. ಸಾರ್ವಜನಿಕರು ಸಹಕರಿಸಬೇಕಾಗಿ ಶಾಸಕ ಜೆ.ಆರ್.ಲೋಬೊ ಅವರು ವಿನಂತಿಸಿದ್ದಾರೆ.