ಕಳೆದ ಹಲವಾರು ವರ್ಷಗಳಿಂದ ಹಮಾಲಿ ಕಾರ್ಮಿಕರಾಗಿ ದುಡಿಯುತ್ತಿದ್ದ ಅನೇಕ ನೂರಾರು ಕಾರ್ಮಿಕರು ಗುರುತಿನ ಚೀಟಿ ಇಲ್ಲದೆ ಹಲವಾರು ಸರಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದರು. ಈ ಬಗ್ಗೆ ಹಮಾಲಿ ಸಂಘದವರು ಶಾಸಕರಿಗೆ ಮನವಿ ನೀಡಿದ್ದರು. ಮನವಿಗೆ ಸ್ಪಂದಿಸಿದ ಶಾಸಕರು ಈ ಬಗ್ಗೆ ಕಾರ್ಮಿಕ ಇಲಾಖೆ ಹಾಗೂ ಎ.ಪಿ.ಎಮ್.ಸಿ ಅಧಿಕಾರಿಗಳ ಜೊತೆ ಸಭೆಗಳನ್ನು ನಡೆಸಿ ಅವರಿಗೆ ದೊರಕುವ ಸರಕಾರ ಸೌಲಭ್ಯಗಳನ್ನು ದೊರಕುವಂತೆ ಅವರಿಗೆ ಗುರುತಿನ ಚೀಟಿಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಈಗಾಗಲೇ 89 ಮಂದಿ ಅರ್ಹ ಕಾರ್ಮಿಕರಿಗೆ ಗುರುತಿನ ಚೀಟಿಯನ್ನು ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಹಮಾಲಿ ಕಾರ್ಮಿಕರಿಗೆ ಗುರುತಿನ ಚೀಟಿ ನೀಡಲಾಗುವುದು. ಈ ಮೂಲಕ ಹಮಾಲಿ ಕಾರ್ಮಿಕರ ಸಮಸ್ಯೆಗಳನ್ನು ಶೀಘ್ರದಲ್ಲಿ ಪರಿಹರಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾರ್ಪೋರೇಟರಾದ ಅಬ್ದುಲ್ ಲತೀಫ್, ಎ.ಪಿ.ಎಮ್.ಸಿ ಅಧ್ಯಕ್ಷರಾದ ಪ್ರಮೋದ್ ಕುಮಾರ್, ಸದಸ್ಯರಾದ ಭರತೇಶ್ ಅಮಿನ್, ಶ್ರೀಮತಿ ಪ್ರತಿಭಾ ರಾಜ್ ಕುಮಾರ್, ಜಯಶೀಲ, ಹಮಾಲಿ ಶ್ರಮಿಕ ಸಂಘದ ಅಧ್ಯಕ್ಷರಾದ ಇಮ್ತಿಯಾಝ್ ಬಿ.ಕೆ, ಸುನಿಲ್ ಕುಮಾರ್ ಬಜಾಲ್ ಮುಂತಾದವರು ಉಪಸ್ಥಿತರಿದ್ದರು.