ಮಂಗಳೂರು: ಬಜಾಲ್ ಕಲ್ಲಕಟ್ಟೆ ರಸ್ತೆಯನ್ನು ಲೋಕೋಪಯೋಗಿ ಇಲಾಖೆಯಿಂದ ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸುತ್ತಿದ್ದು ಕಾಮಗಾರಿಯನ್ನು ಶಾಸಕ ಜೆ.ಆರ್.ಲೋಬೊ ಅವರು ವೀಕ್ಷಿಸಿದರು.

ಇಲ್ಲಿ ಸಂಪರ್ಕ ರಸ್ತೆಯನ್ನು ನಿರ್ಮಿಸುವಂತೆ ಶಾಸಕ ಜೆ.ಆರ್.ಲೋಬೊ ಅವರ ಶಿಫಾರಸಿನಂತೆ ಕೈಗೊಳ್ಳಲಾಗುತ್ತಿದೆ. ಲೋಕೋಪಯೋಗಿ ಇಲಾಖೆಯವರು ಕೈಗೊಂಡಿರುವ ಅಭಿವೃದ್ಧಿ ಕೆಲಸಗಳನ್ನು ಖುದ್ದು ನೋಡಿದ ಶಾಸಕರು ಮುಂದೆ ಇಲ್ಲಿ ಆಗಬೇಕಾದ ಕೆಲಸಗಳ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದರು.

ಈ ಪ್ರದೇಶದಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.

ಜನರೂ ಕೂಡಾ ಅಭಿವೃದ್ಧಿ ಕಾಮಗಾರಿಗಳಿಗೆ ಬೆಂಬಲ ನೀಡುವಂತೆ ಆ ಮೂಲಕ ಮುಂದೆ ಆಗಬೇಕಾದ ಕೆಲಸಗಳನ್ನು ಮಾಡಿಸಲು ನೆರವಾಗುತ್ತದೆ ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು.