ಮಂಗಳೂರು: ಮಂಗಳೂರು ದಕ್ಷಿಣ ವಿಧಾನ ಸಭಾದ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಸಭೆ ನವೆಂಬರ್ 6 ರಂದು ಮಧ್ಯಾಹ್ನ 3 ಗಂಟೆಗೆ ಬಲ್ಮಠದ ಶಾಂತಿನಿಲಯ ಹಾಲ್ ನಲ್ಲಿ ನಡೆಯಲಿದೆ.

ಈ ಸಭೆಯಲ್ಲಿ ರಾಜ್ಯ ಸಭೆ ಸದಸ್ಯ ಆಸ್ಕರ್ ಫೆರ್ನಾಂಡಿಸ್ , ಅರಣ್ಯ ಸಚಿವ ಬಿ.ರಮಾನಾಥ್ ರೈ, ಶಾಸಕಿ ಶಕುಂತಲಾ ಶೆಟ್ಟಿ, ವಿಧಾನ ಸಭೆಯ ಮುಖ್ಯಸಚೇತಕ ಐವನ್ ಡಿ’ ಸೋಜಾ, ಶಾಸಕ ಜೆ.ಆರ್.ಲೋಬೊ, ಮೇಯರ್ ಹರಿನಾಥ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ , ಮಂಗಳೂರು ಉತ್ತರ ವಲಯ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ ಕುಮಾರ್ ದಾಸ್, ಮಹಿಳಾ ಅಧ್ಯಕ್ಷೆ ಶಶಿಕಲಾ ಪದ್ಮನಾಭ, ನಗರಪಾಲಿಕೆ ಮುಖ್ಯ ಸಚೇತಕ ಶಶಿಧರ್ ಹೆಗ್ಡೆ ಭಾಗವಹಿಸುತ್ತಾರೆ.

ಸಂಪನ್ಮೂಲ ವ್ಯಕ್ತಿಗಳಾಗಿ ರಮೀಳಾ ಶೇಖರ್ ಮತ್ತು ಆಶಾ ಜೋಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.